ಬಂಟ್ವಾಳ : ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಎಂದು ಗುರುತಿಸಲಾಗಿದೆ.
ಮಿತ್ತೂರು ಮತ್ತು ಕೊಡಾಜೆ ಎಂಬಲ್ಲಿ ಮನೆಯಿಂದ ಅನಿಲ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ವಸ್ತುಗಳು ಕಳ್ಳತನ ನಡೆದಿತ್ತು. ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾಧ ತಂಡದ ಸಿಬ್ಬಂದಿಗಳು ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಇಬ್ಬರನ್ನು ಆಟೋ ರಿಕ್ಷಾ ಸಹಿತ ವಶಕ್ಕೆ ಪಡೆದುಕೊಂಡಿದ್ದರು.
ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಭಾಗಿಯಾಗಿವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.50 ಲಕ್ಷ ರೂ ಎಂದು ಅಂದಾಜಿಸಲಾಗಿದೆ.
Two arrested in connection with house, Anganwadi theft cases
In connection with cases of theft from a house and an anganwadi, two accused were arrested at Maani Junction in Maani village, Bantwal taluk, on Oct 29 by a crime team led by Vittal Police Station Inspector H E Nagaraj. The arrested individuals are Mohammad Riaz Hasanabba (38), son of Hasanabba, resident of Dharmanagar in Boliyar village, Ullal taluk, and Mohammad Intiyaz (38), son of Abdul Rahiman, resident of Halekote in Ullal taluk.