Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಭೀಮಾತೀರದಲ್ಲಿ ರಕ್ತದೋಕುಳಿ: ಭೀಕರ ಕೊಲೆ – ಬಾಗಪ್ಪ ಹರಿಜನ್ ಛಿದ್ರ ಛಿದ್ರ.!!

Advertisement

ಚಂದಪ್ಪನ ಶಿಷ್ಯ, ನಟೋರಿಯಸ್​ ರೌಡಿ ಬಾಗಪ್ಪ ಹರಿಜನ್​​ನ ಕೊಲೆಯಾಗಿದೆ. ವಿಜಯಪುರ ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್​ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ.

ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ.

ವಿಜಯಪುರ: "ಭೀಮಾತೀರ"ದ ಕುಖ್ಯಾತಿಯ ಬಾಗಪ್ಪ ಹರಿಜನ್ ಬರ್ಬರ ಹತ್ಯೆ!

ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ.

ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ 8-50 ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಭೀಮಾತೀರದ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ, ಕೈ  ಬೆರಳು ಕತ್ತರಿಸಿ ಬರ್ಬರವಾಗಿ ಕೊಲೆ | Times Now Kannada

ಭೀಮಾ ತೀರದ ಹಂತಕದ ಕುಖ್ಯಾತಿಯಲ್ಲಿ ಬಾಗಪ್ಪ ಹರಿಜನ ಕೂಡ ಒಬ್ಬ. ಈ ಹಿಂದೆ ಇಡೀ ಭೀಮಾತೀರವನ್ನು ನಡುಗಿಸಿದ್ದ ಚಂದಪ್ಪ ಹರಿಜನನ ಸಹೋದರ ಸಂಬಂಧಿ ಕೂಡ ಆಗಿರುವ ಬಾಗಪ್ಪ ಹರಿಜನ ಚಂದಪ್ಪ ಹರಿಜನನ ಬಲಗೈ ಬಂಟನಾಗಿದ್ದ.

ಭೀಮಾತೀರದ ಹಂತಕ ಚಂದಪ್ಪನ ಶಿಷ್ಯನಾಗಿದ್ದ ಬಾಗಪ್ಪ ಹರಿಜನ್​; ಈತನ ಅಪರಾಧ ಹಿನ್ನೆಲೆ ಇಲ್ಲಿದೆ

ಚಂದಪ್ಪನ ಸಾವಿನ ಬಳಿಕ ಕುಟುಂಬದಲ್ಲಿ ಉಂಟಾಗಿದ್ದ ಆಸ್ತಿ ಗಲಾಟೆ ಪ್ರಕರಣದಲ್ಲಿ ಬಾಗಪ್ಪ ಚಂದಪ್ಪನ ಸಹೋದರ ಬಸಪ್ಪ ಹರಿಜನ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ. ಆಲಮೇಲ ಪೊಲೀಸ್‌ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದಲ್ಲದೆ ಗಾಂಧಿಚೌಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2013ರಲ್ಲಿ ಬ್ಯಾಡಗಿಹಾಳ ಗ್ರಾಮದ ಬಸ್‌ ಕಂಡಕ್ಟರ್‌ ಲಾಳಸಂಗಿ ಎಂಬುವರ ಕೊಲೆ ಪ್ರಕರಣದಲ್ಲಿ ಬಾಗಪ್ಪ ಪ್ರಮುಖ ಪಾತ್ರಧಾರಿಯಾಗಿದ್ದು, ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

Related posts

Leave a Comment