ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.
ಕೇಂದ್ರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವಾಸುದೇವ ಸುಮಾರು ಐದು ಎಕರೆ ಭೂಮಿಯಲ್ಲಿ ಕಲ್ಲಂಗಡಿ ಬೆಳೆಯುತ್ತಿದ್ದರು ಮತ್ತು ಸುಗ್ಗಿಯ ತಯಾರಿ ನಡೆಸುತ್ತಿದ್ದರು. ಆ ದಿನದಂದು, ಅವರು ನಾಗೂರಿನಲ್ಲಿ ತನ್ನ ಕೆಲಸವನ್ನು ಮುಗಿಸಿ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಕೊAಕಣ ರೈಲು ಹಳಿಯನ್ನು ದಾಟುತ್ತಿರುದಾಗ ಮಂಗಳೂರು ಕಡೆಯಿಂದ ಮಡಗಾಂವ್ ಕಡೆಗೆ ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ವಾಸುದೇವ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.