Mangalore and Udupi news
Blogದಕ್ಷಿಣ ಕನ್ನಡಪ್ರಸ್ತುತ

ಬಂಟ್ವಾಳ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ; 33 ಮಂದಿಯ ಬಂಧನ – 7 ಲಕ್ಷಕ್ಕೂ ಅಧಿಕ ನಗದು ವಶ

Advertisement

ಬಂಟ್ವಾಳ; ಮನೆಯಲ್ಲಿ ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದ ವೇಳೆ ಬಂಟ್ವಾಳ ಪೊಲೀಸರು ದಾಳಿ ನಡೆಸಿ ಒಟ್ಟು 33 ಜನರನ್ನು ಹಾಗೂ ಬರೋಬ್ಬರಿ ಏಳು ಲಕ್ಷಕ್ಕೂ ಅಧಿಕ ಮೌಲ್ಯದ ನಗದು ವಶಪಡಿಸಿಕೊಂಡ ಘಟನೆ ನಡೆದಿದೆ.

ದಿನಾಂಕ: 17-2-2024 ರಂದು ಮುಂಜಾನೆ ವೇಳೆ ಬಂಟ್ವಾಳ ತಾಲೂಕು, ಬಡಗಬೆಳ್ಳೂರು ಗ್ರಾಮದ, ಬಡಗಬೆಳ್ಳೂರು ಎಂಬಲ್ಲಿ ನಿಶಾಂತ್ ಎಂಬವರ ಮನೆಯಲ್ಲಿ ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದಾಗ, ಬಂಟ್ವಾಳ ಡಿವೈಎಸ್‌ಪಿ ವಿಜಯ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ, ಸಬ್ ಇನ್ಸ್ಪೆಕ್ಟರ್ ಹರೀಶ್ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಕಾರ್ಯದಕ್ಷತೆ ಮೆರೆದಿದ್ದಾರೆ.

ನಿತಿನ್ ಕೊಟ್ಟಾರಿ, ಪಮ್ಮಿ ಕೊಡಿಯಾಲ್‌ಬೈಲ್, ರಾಜೇಶ್ ಕೈಕಂಬ ಯಾನೆ ಕೊಂಬು ರಾಜೇಶ್ ಸೇರಿದಂತೆ 33 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಾಳಿ ವೇಳೆ ಸದ್ರಿ ಸ್ಥಳದಲ್ಲಿ ಅಕ್ರಮವಾಗಿ “ಉಲಾಯಿ-ಪಿದಾಯಿ” ಜುಗಾರಿ ಆಟ ಆಡುತ್ತಿರುವುದು ಕಂಡುಬAದಿರುತ್ತದೆ. ದಾಳಿ ವೇಳೆ ಜುಗಾರಿ ಆಟ ಆಡಿಸುತ್ತಿದ್ದ ಆರೋಪಿತ ನಿಶಾಂತ್ ತಪ್ಪಿಸಿಕೊಂಡಿದ್ದು, ಆಟದಲ್ಲಿ ನಿರತರಾಗಿದ್ದ ಒಟ್ಟು 33 ಜನರನ್ನು ವಶಕ್ಕೆ ಪಡೆದುಕೊಂಡು, ಅಪಾದಿತರಿಂದ ಜುಗಾರಿ ಆಟಕ್ಕೆ ಬಳಸಿದ ನಗದು ರೂ. 7,81,420/-, ಇಸ್ಪೀಟ್ ಎಲೆಗಳು, ಸ್ಟೀಲ್ ಟೇಬಲ್, ಪ್ಲಾಸ್ಟಿಕ್ ಚೆಯರ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಸ್ವಾಧೀನಪಡಿಸಿದ ಸ್ವತ್ತುಗಳ ಒಟ್ಟು ಮೌಲ್ಯ ರೂ.7,90,220/- ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 112/2024 ಕಲಂ: 79,80 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

 

Related posts

1 comment

Nai December 18, 2024 at 2:12 pm

Pammi malla kaluve ayena club undu matha undu police dakkuleg tingol tingol korpe

Reply

Leave a Comment