Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಬಾಲಕ ನಾಪತ್ತೆ – ಪತ್ತೆಗೆ ಮನವಿ.!!

Advertisement

ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.

ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ.

ಆತ ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ.

ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment