Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ವಿದ್ಯಾರ್ಥಿನಿ ಆತ್ಮಹತ್ಯೆ ಹಿಂದೆ ಲವ್ ದೋಖಾ.! ಪ್ರವೀಣ್ ಗೌಡ ವಿರುದ್ಧ ಪ್ರಕರಣ ದಾಖಲು


ಬೆಳ್ತಂಗಡಿ : ವಿದ್ಯಾರ್ಥಿನಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಹಿಂದೆ ಲವ್ ದೋಖಾ ನಡೆದಿದೆ ಎಂದು ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಿತ್ತಬಾಗಿಲು ಗ್ರಾಮದ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ 17ವರ್ಷ ಪ್ರಾಯದ ಋಶ್ವಿ ಮೃತಪಟ್ಟ ಯುವತಿ. ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬ ಯುವಕ ಆತ್ಮಹತ್ಯೆಗೆ ಕಾರಣ ಎಂದು ದೂರು ನೀಡಲಾಗಿದೆ.

ಪ್ರವೀಣ್ ಗೌಡ ಎಂಬಾತ ಸಾಮಾಜಿಕ ಜಾಲತಾಣದ ಮುಖಾಂತರ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿಯು ತಾಯಿ ಜೊತೆ ನನ್ನನ್ನು ಪ್ರವೀಣ್ ಜೊತೆ ಮದುವೆ ಮಾಡಿಕೊಡಿ ಎಂದು ಹೇಳಿದ್ದಳು. ಯುವಕ ಆಕೆಯ ಜೊತೆ ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಮೋಸ ಮಾಡಿದ್ದಾನೆ “ಸತ್ತರೆ ಸಾಯಿ ನಾನು ನಿನ್ನನ್ನು ಮದುವೆಯಾಗಲ್ಲ” ಎಂದು ಆತ್ಮಹತ್ಯೆಗೆ ಪ್ರಚೋದನೆಯನ್ನು ನೀಡಿದ್ದು, ನೊಂದ ವಿದ್ಯಾರ್ಥಿನಿ ನ.20 ರಂದು ರಾತ್ರಿ ಮನೆಯಲ್ಲಿದ್ದ ಇಲಿಪಾಷಣ ಸೇವಿಸಿದ್ದಾಳೆ.

ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ವಾಂತಿ ಮಾಡಿದ್ದರಿಂದ ಮನೆಮಂದಿಗೆ ವಿಚಾರ ತಿಳಿದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ನ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮರಂಗಾಯಿ ನಿವಾಸಿ ಉಮನಗೌಡ ಮಗನಾದ ಪ್ರವೀಣ್ (22) ವಿರುದ್ಧ ದೂರು ನೀಡಿದ್ದಾರೆ.

ಸದ್ಯ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕ ಮೊಬೈಲ್ ಸ್ಪೀಚ್ ಆಫ್ ಮಾಡಿ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Related posts

Leave a Comment