ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿ ಇರುವ ಗುಂಡಿಯ ಬಳಿ ಬ್ಯಾರಿಕೆಟ್ ಇಡಲಾಗಿತ್ತಾದರೂ ಅದಕ್ಕೆ ಯಾವುದೇ ರಿಫ್ಲೆಕ್ಟರ್ ಸ್ಟಿಕ್ಕರ್ ಅಳವಡಿಸಲಾಗಿರಲಿಲ್ಲ. ಹೀಗಾಗಿ ಯುವಕನಿಗೆ ಬ್ಯಾರಿಕೇಟ್ ಮತ್ತು ಗುಂಡಿ ಗಮನಕ್ಕೆ ಬಂದಿರಲಿಲ್ಲ ಎನ್ನಲಾಗಿದೆ. ಸುಗ್ಗಿ ಬಾರ್ & ರೆಸ್ಟೋರೆಂಟ್ ಬಳಿ ಹೈಮಾಸ್ಟ್ ದೀಪ ಇತ್ತು. ಈಗ ಅದನ್ನು ತೆರವುಗೊಳಿಸಿ ಗ್ಯಾಸ್ ಸಾಗಾಟದ ಬುಲೆಟ್ ಟ್ಯಾಂಕರ್ ಗಳು ಪಾರ್ಕಿಂಗ್‌ಗೆ ಹೋಗಲು ರಸ್ತೆ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೊತೆಗೆ ಈ ರಸ್ತೆಯಲ್ಲಿ ಗ್ಯಾಸ್ ಸಾಗಾಟದ ಬುಲೆಟ್ ಟ್ಯಾಂಕರ್ ಚಾಲಕರು ರಸ್ತೆ ಸಂಚಾರದ ನಿಯಮಗಳನ್ನು ಗಾಳಿಗೆ ತೂರಿ ಸಂಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಸ್ಥಳಿಯರು ದೂರು ನೀಡಿದರೂ ಪ್ರಯೋಜನ ವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಕಾಂಕ್ರಿಟ್ ರಸ್ತೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದರೂ ಇನ್ನೂ ರಸ್ತೆಯನ್ನು ಪೂರ್ಣಗೊಳಿಸಿಲ್ಲ. ಈ ಹೊಂಡ ಸರಿ ಪಡಿಸಲು ಮತ್ತು ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ಜನರು ಅಪಘಾತಕ್ಕೀಡಾಗಬೇಕು, ಎಷ್ಟು ಜನರು ರಕ್ತಹರಿಸಬೇಕು. ಪ್ರಾಣ ಬಲಿಗಾಗಿ ಸುರತ್ಕಲ್ ಮಹಾನಗರ ಪಾಲಿಕೆ ಕಾಯುತ್ತಿದೆಯೇ.? ಎಂದು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಸ್ಥಳೀಯ ನಾಗರಿಕರು ಸೇರಿ ಮಹಾ ನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ಎದುರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
An incident took place on Wednesday night in which a youth with a two-wheeler fell into a pothole that had been there for a long time near the suggi bar on the Kana-Bala road. Dhanush, a resident of Katipalla 1st block, has been identified as the injured youth.