Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರು

ಮಂಗಳೂರು: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ.!!

ಮಂಗಳೂರು : ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ.

ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

ಮಂಗಳೂರಿನ ಏರ್ ಇಂಡಿಯಾ ಸಿಬ್ಬಂದಿ ಮಧ್ಯಾಹ್ನ 1:30ರ ಸುಮಾರಿಗೆ ಈ ಸಂದೇಶವನ್ನು ಗಮನಿಸಿ ತಕ್ಷಣ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಂಗಳೂರಿನಿಂದ ಬೆಳಗ್ಗೆ 9:30ಕ್ಕೆ ಹೊರಟಿದ್ದ ವಿಮಾನ ಮಧ್ಯಾಹ್ನ 1:30ಕ್ಕೆ ಸುರಕ್ಷಿತವಾಗಿ ದುಬೈಗೆ ಬಂದಿಳಿದಿದ್ದು, ಈ ವೇಳೆ ಉಗ್ರರು ಬಾಂಬ್ ಬೆದರಿಕೆ ಹಾಕಿದ್ದರು. ಇನ್ನು ವಿಮಾನದಲ್ಲಿ ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Mangalore Today | Latest main news of mangalore, udupi - Page  Adani-owned-Mangaluru-airport-seeks-user-fee-hike

A bomb threat targeting Air India flights across various parts of India, including a flight from Mangaluru International Airport to Dubai, was posted on Twitter.

The threat, shared at around 12:35 pm on Sunday from an account named ‘Schizophrenia 111’, claimed that bombs were planted on six Air India flights. Air India personnel in Mangaluru noticed the message around 1:30 pm and immediately filed a complaint with the Bajpe police station.

Related posts

Leave a Comment