ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ನ.17 ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ನಡೆದಿದೆ.
ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಮೃತ ಬಾಲಕ.
ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದು, ಕೂಡಲೇ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ, ಆ ವೇಳೆಗಾಗಲೆ ಬಾಲಕ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆ..
ಶುಭೋದ್ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ 8 ತರಗತಿ ವಿದ್ಯಾರ್ಥಿ. ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿರುತ್ತದೆ.