Mangalore and Udupi news
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಜಾಮೀನು ನಿರಾಕರಣೆ.!!

ಮುಲ್ಕಿ : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ ಯರ್ ಎಂಜಿನಿಯರ್ ನಾಗ ರಾಜು ಜೆ.ಎಚ್. ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದು  ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

ಆರೋಪಿಗಳು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು  ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್. ರವರು ವಿಚಾರಣೆ ನಡೆಸಿದ್ದು ನ್ಯಾಯಾಲಯ ಆರೋಪಿತರಿಗೆ ಜಾಮೀನು ನಿರಾಕರಿಸಿದೆ. ಇದರಿಂದಾಗಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಂದುವರಿದಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದಾರೆ.

Lokayukta police arrested Kinnigoli Town Panchayat Head MR. Swamy and Junior Engineer Naga Raju J.H. while accepting bribe and produced him before the court but the court refused to grant him bail.

 

Related posts

Leave a Comment