Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ – ಸವಾರ ಸಾವು.!!

Advertisement

ಸುರತ್ಕಲ್ : ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ಡಿ.20 ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ.

ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದರೆನ್ನಲಾಗಿದೆ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಬೆನ್ನಟ್ಟಿ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಡಿಕ್ಕಿ ಹೊಡೆಸದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.

ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

ಸಾರ್ವಜನಿಕರಿಂದ ರಸ್ತೆ ತಡೆದು ಪ್ರತಿಭಟನೆ

ಅಪಘಾತ ನಡೆದ ಬೆನ್ನಲ್ಲೇ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಇಂದು ನಡೆದ ಅಪಘಾತಕ್ಕೆ ಪೊಲೀಸರ ಅನಾಗರಿಕ ವರ್ತನೆಯೇ ಕಾರಣ. ತಪ್ಪಿತಸ್ಥ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಸಾರ್ವಜನಿಕರು ಸುರತ್ಕಲ್ – ಕಾನ ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ರಾತ್ರಿ 10 ಗಂಟೆಯ ಬಳಿಕವಷ್ಟೇ ಗ್ಯಾಸ್ ಟ್ಯಾಂಕರ್‌ಗಳು, ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕು. ಖಾಸಗಿ ಬಸ್‌ಗಳ ಅತಿ ವೇಗಕ್ಕೆ ಕಡಿವಾಣ ಹಾಕಲು ಮುಖ್ಯ ಸ್ಥಳಗಳಲ್ಲಿ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಬೇಕು. ಅಪಘಾತ ಪ್ರದೇಶಗಳನ್ನು ಗುರುತಿಸಿ ಬ್ಯಾರಿಕೇಡ್ ಗಳನ್ನು ಅಳವಡಿಸುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕೆಂದು ಮಂಗಳೂರು ಮಹಾನಗರ ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ಕಿಶೋರ್ ಕುಮಾರ್ ಸಹಿತ ನಾಗರಿಕರು ಪೊಲೀಸರನ್ನು ಆಗ್ರಹಸಿದರು.

Related posts

Leave a Comment