Mangalore and Udupi news
ಅಪಘಾತದೇಶ- ವಿದೇಶಪ್ರಸ್ತುತ

ಉತ್ತರಾಖಂಡ್ – ಕಮರಿಗೆ ಉರುಳಿ ಬಿದ್ದ ಬಸ್ 36ಕ್ಕೂ ಅಧಿಕ ಮಂದಿ ಸಾವು.!!

ಬಸ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 36ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಅಧಿಕರು ಮಕ್ಕಳಾಗಿದ್ದಾರೆಂದು ವರದಿಗಳು ತಿಳಿಸಿವೆ.

ಸದ್ಯ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Uttarakhand bus accident: Toll rises to 36; here's what we know so far |  Dehradun News - Times of India

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 1ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ನೆರವು ಘೋಷಿಸಿದ್ದಾರೆ.Uttarakhand bus accident: 28 killed as bus falls into deep gorge in Almora,  many feared trapped - BusinessToday

36 people have been killed, at least five remain missing, and 10 were injured after a 43-seater bus carrying 60 passengers plunged into a deep gorge near Marchula in Almora district on Monday morning.

Almora’s disaster management officer, Vineet Pal, told TOI, “The injured who have been taken to nearby hospitals for treatment. Local villagers are assisting rescue workers in locating passengers still trapped in the wreckage.”

Related posts

Leave a Comment