Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಡ್ರಗ್ ಪೆಡ್ಲರ್ ಅರೆಸ್ಟ್.!!

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ಆಸೀಫ್ @ ಆಚಿ(32) ಎಂದು ಗುರುತಿಸಲಾಗಿದೆ.

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಲ್ಲಿ ಖರೀದಿಸಿಕೊಂಡು ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯಿಂದ 1,35,000/- ಮೌಲ್ಯದ 27 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,45,500/- ಆಗಬಹುದು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

Leave a Comment