Mangalore and Udupi news
ಅಪಘಾತದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಬೃಹತ್ ಡ್ರಗ್ ಬೇಟೆ – 6 ಕೋಟಿ ರೂ. ಮೌಲ್ಯದ MDMA ಡ್ರಗ್ ಸಹಿತ ಆರೋಪಿಯ ಬಂಧನ

ಮಂಗಳೂರು: ನಗರದಲ್ಲಿ ಬೃಹತ್‌ ಡ್ರಗ್‌ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್‌ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್‌ ಪ್ರಜೆ ಪೀಟರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸುಮಾರು 6 ಕೆಜಿ ಡ್ರಗ್‌ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಇದು ಅತಿದೊಡ್ಡ ಡ್ರಗ್‌ ವಶಕ್ಕೆ ಪಡೆದ ಪ್ರಕರಣ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಎಂಡಿಎಂಎ ಮಾರಾಟದ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ನೀಡಿದ್ದ ಮಾಹಿತಿ ಆಧಾರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ವಿತರಣೆಗೆ ಸಿದ್ಧವಾಗಿದ್ದ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ವಿವೇಕಾನಂದ ನಗರದ ಬಾಡಿಗೆ ಮನೆಯಲ್ಲಿದ್ದ ಪೀಟರ್‌ ಅಕೆಡಿ ಬೆಲನೋವು ಎಂಬಾತನನ್ನು ಪತ್ತೆ ಹಚ್ಚಿ ಆತನ ಮನೆಯಲ್ಲಿ ಪತ್ತೆಹಚ್ಚಿ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್‌ ಫೋನ್‌, ಡಿಜಿಟಲ್‌ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್‌ ಕಾರ್ಡ್‌, 17 ಇನಾಕ್ಟಿವ್‌ ಸಿಮ್‌ ಕಾರ್ಡ್‌ಗಳು, 10 ವಿವಿಧ ಬ್ಯಾಂಕ್‌ ಖಾತೆಗಳ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.

Mangalore: A huge drug network came to light on Monday. MDMAG worth Rs 6 crore has been seized by the CCB police. In addition, a Siberian citizen named Peter has been arrested in connection with the case.

Related posts

Leave a Comment