Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಚಿನ್ನದ ಸರ ಎಳೆದುಕೊಂಡು ಹೋದ ಆರೋಪಿ ಅರೆಸ್ಟ್.!!

Advertisement

ಮಂಗಳೂರು : ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬoಧಿಸಿದoತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.

ಬAಧಿತ ಆರೋಪಿಯನ್ನು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಎಂದು ಗುರುತಿಸಲಾಗಿದೆ.

ಆರೋಪಿಯು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ಮಧ್ಯಾಹ್ನ ವೇಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದ.

Hyderabad police nab chain snatcher, recover 40 grams of gold worth Rs. 3.5 L

ಆರೋಪಿ ಮತ್ತು ಕಳವು ಮಾಡಿದ ಸೊತ್ತು ಪತ್ತೆಯ ಬಗ್ಗೆ ವಿಶೇಷ ತಂಡ ರಚಿಸಿದ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್. ಅವರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯಿಂದ ಸುಮಾರು 70,000 ರೂ. ಮೌಲ್ಯದ ಚಿನ್ನದ ಸರ, 50,000 ರೂ. ಮೌಲ್ಯದ ಸ್ಕೂಟರ್, ಸುಮಾರು 50,000 ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

ಆರೋಪಿತನ ವಿರುದ್ಧ ಮೂಡುಬಿದಿರೆ, ಮೂಲ್ಕಿ, ಬಜಪೆ, ಉಪ್ಪಿನಂಗಡಿ ಪೊಲೀಸ್ ಠಾಣೆ ಮತ್ತು ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಸುಲಿಗೆ ಮತ್ತು ಕಳವಿಗೆ ಸಂಬAಧಿಸಿದ ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳಲ್ಲಿ ಆರೋಪಿತ 2 ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದುಕೊಂಡಿದ್ದ. ಸರ ಮಾರಾಟದ ಹಣದಿಂದ ಆತ ಆಟೋ ರಿಕ್ಷಾ ಖರೀದಿ ಮಾಡಿದ್ದ.

Related posts

Leave a Comment