Mangalore and Udupi news
Blog

ಕರುನಾಡಿನ ನಾಡದೇವಿಗೆ ಚಿನ್ನದ ರಥ..! ಪ್ರಸ್ತಾವ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರಿನ ಚಾಮುಂಡೇಶ್ವರಿ ಕೋಟ್ಯಾಂತರ ಭಕ್ತರು ಆರಾಧಿಸುವ ದೇವತೆ. ನಾಡಿನ ಅಧಿದೇವತೆ ಈಕೆ. ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಮೇಲೆ ರೂಢಳಾಗುತ್ತಾಳೆ. ನಾಡದೇವಿಯ ವೈಭವಕ್ಕೆ ಮತ್ತೊಂದು ಗರಿ ಸೇರಿಕೊಳ್ಳಲಿದೆ.

ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬAಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಮಾಡಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.

ಚಾಮುAಡೇಶ್ವರಿ ದೇವಿ ಕನ್ನಡ ನಾಡಿನ ಅಸ್ಮಿತೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡಹಬ್ಬ ಎಂದು ಕರೆಯಲಾಗುತ್ತದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆಯಾಗಿತ್ತು. ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು.

ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊAದನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ವಕ್ಫ್ ವಿವಾದ, ಹಿಂದೂ ವಿರೋಧಿ ಧೋರಣೆಗಳಿಂದ ಅಪಾರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಸಿಎಂ ಸಿದ್ದರಾಮಯ್ಯ, ಈಗ ಹಿಂದೂಗಳ ಓಲೈಕೆಗೆ ಮುಂದಾದಂತೆ ಕಾಣುತ್ತದೆ ಎಂಬ ಮಾತುಗಳನ್ನೂ ಕೇಳಬೇಕಾಗುತ್ತದೆ.

Related posts

Leave a Comment