Mangalore and Udupi news
ಅಪರಾಧಕಾಸರಗೋಡುಪ್ರಸ್ತುತ

ಕಾಸರಗೋಡು: ಇಲಿ ವಿಷ ಸೇವಿಸಿ ನರ್ಸ್ ಮೃತ್ಯು

ಕಾಸರಗೋಡು: ಇಲಿ ಪಾಷಾಣ ಸೇವಿಸಿ ಚಿಂತಾಜಕನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಪಯ್ಯನ್ನೂರು ಬಿಕೆಎಂ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ವಿ ರಜಿತಾ ಮೃತಪಟ್ಟಾಕೆ.

ನ. 22 ರ ಶುಕ್ರವಾರ ರಾತ್ರಿ ರಚಿತಾ ಇಲಿ ಪಾಷಾಣ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ತ್ರಿಕಾರಿಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಅಸುನೀಗಿದ್ದಾರೆ.

ಯುವತಿಗೆ ಒಂದುವರೆ ವರ್ಷದ ಹಿಂದೆ ಮದುವೆಯಾಗಿತ್ತು. ಯಾಕಾಗಿ ವಿಷ ಸೇವಿಸಿದ್ದಾರೆ ಎಂಬುವುದು ತಿಳಿದುಬಂದಿಲ್ಲ. ಚಂತೇರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related posts

Leave a Comment