Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಲಂಚ ಸ್ವೀಕಾರ – ಪಿಡಿಒಗೆ 3 ವರ್ಷ ಜೈಲು.!!

ಮಂಗಳೂರು :  ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೈಗೆ ಸಿಲುಕಿದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ನಾಯ್ಕ್ ಅವರಿಗೆ ಮೂರು ವರ್ಷಗಳ ಸಾದಾ ಸಜೆ ಮತ್ತು 50 ಸಾವಿರ ರೂ. ಡಿಸೆಂಬರ್ 13 ರಂದು ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
Photo of Prem singh naik
ಈ ಪ್ರಕರಣವು ಜೂನ್ 3, 2019 ರಂದು ನಡೆದ ಘಟನೆಗೆ ಸಂಬಂಧಿಸಿದೆ, ಪ್ರೇಮ್ ಸಿಂಗ್ ನಾಯಕ್ ಅವರು 9/11 ನೋಂದಣಿಗೆ ಸಂಬಂಧಿಸಿದಂತೆ ರೂ 9,000 ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018) ಕಲಂ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಶಸ್ವಿ ಟ್ರ್ಯಾಪ್ ಕಾರ್ಯಾಚರಣೆ ನಂತರ ಆರೋಪಿಯನ್ನು ಬಂಧಿಸಿದ್ದರು.
ವಿಚಾರಣೆಯ ನಂತರ (ವಿಶೇಷ ಪ್ರಕರಣ ಸಂಖ್ಯೆ 170/2020) ನ್ಯಾಯಾಲಯವು ಆರೋಪಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡವನ್ನು ಪಾವತಿಸದಿದ್ದಲ್ಲಿ, ಆರೋಪಿಯು ಹೆಚ್ಚುವರಿಯಾಗಿ ಒಂದು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.
ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ, ಕರ್ನಾಟಕ ಲೋಕಾಯುಕ್ತ, ಮಂಗಳೂರು ರವೀಂದ್ರ ಮುನ್ನಿಪಾಡಿ ವಾದ ಮಂಡಿಸಿದ್ದರು. ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಗೆ ಈ ತೀರ್ಪು ಮಹತ್ವದ ಹೆಜ್ಜೆಯಾಗಿದೆ.

Related posts

Leave a Comment