
ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ.
ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು, ಈತನ ಸಹೋದರಿ ನಿಶಾ ಪ್ರಾಂಶುಪಾಲೆ ಆಗಿದ್ದಾರೆ. ಬಾಲಕಿಯರು ತಪ್ಪು ಮಾಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹಸನ್, ಕಚೇರಿಗೆ ಕರೆದು ನಾಲ್ಕೈದು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ.
ಹಲ್ಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ ಪೋಷಕರು ಗರಂ ಆಗಿದ್ದಾರೆ. ಘಟನೆ ದೃಶ್ಯ ಕಂಡು ಪೋಷಕರು ಮದರಸ ಮುಂದೆ ಗಲಾಟೆ ಮಾಡಿದ್ದಾರೆ. ಮದರಸ ಪ್ರಿನ್ಸಿಪಲ್ ಸಹೋದರನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿ ಮೊಹಮ್ಮದ್ ಹಸನ್ನನ್ನು ಬಂಧಿಸಿದ್ದಾರೆ.