Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಸಿಬಿಐ ಅಧಿಕಾರಿಯಂತೆ ನಟಿಸಿ 68 ಲಕ್ಷ ಸುಲಿಗೆ – ಷೇರು ಮಾರುಕಟ್ಟೆ ಹೆಸರಲ್ಲಿ 90ಲಕ್ಷ ವಂಚನೆ.!

ಮಂಗಳೂರು : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಬಿಐ ಅಧಿಕಾರಿಯಂತೆ ನಟಿಸಿ ಸುಮಾರು 68 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ನಿಸಾರ್ ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಬಂಧನ ನಡೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನಿಸಾರ್ ಸೈಬರ್ ಕ್ರೈಮ್ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಯಂತೆ ನಟಿಸುವ ಮೂಲಕ ಅನೇಕ ಸಂತ್ರಸ್ತರನ್ನು ವಂಚಿಸಿದ್ದಾನೆ ಮತ್ತು ಈ ಸುಳ್ಳು ನೆಪದಲ್ಲಿ ದೊಡ್ಡ ಮೊತ್ತದ ಹಣವನ್ನು ಸುಲಿಗೆ ಮಾಡಿದ್ದಾನೆ.

ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣವನ್ನು ವಂಚನೆ ಮಾಡಿರುವ ಆರೋಪಿಗಳಾದ ಕೇರಳದ ಕೋಝಿಕೋಡ್‌ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಷೇರು ಹೂಡಿಕೆಯಿಂದ ಹೆಚ್ಚಿನ ಆದಾಯವನ್ನು ಭರವಸೆ ನೀಡಿ ಸಂತ್ರಸ್ತರಿಗೆ ಸುಮಾರು 90 ಲಕ್ಷ ರೂ ವಂಚಿಸಿದ್ದಾರೆ.

Related posts

Leave a Comment