ಬಂಟ್ವಾಳ : ಮನೆಯಲ್ಲಿ ಒಂಟಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮೌರಿಸ್ ಡಿಸೋಜ(61) ಎಂದು ಗುರುತಿಸಸಲಾಗಿದೆ.
ಮೌರಿಸ್ ಮನೆಯಲ್ಲಿ ಒಬ್ಬರೇ ವಾಸವಿದ್ದರು. ನ.21ರ ಬೆಳಗ್ಗೆ ಕೆಲಸದವರು ಗಮನಿಸಿದಾಗ ಮೌರಿಸ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೌರಿಸ್ ಡಿಸೋಜ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಒಂಟಿಯಾಗಿದ್ದರಿoದ ಯಾರಿಗೂ ಇದು ತಿಳಿದುಬಂದಿಲ್ಲ.
ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ