Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ.!!


ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು 55-60 ವರ್ಷದ ಅಪರಿಚಿತ ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸದ್ಯ ವಾರಿಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ. ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾರಿಸುದಾರರ ಪತ್ತೆಗೆ ಮನವಿ ಮಾಡಿದ್ದಾರೆ.

Advertisement

Related posts

Leave a Comment