Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಪ್ಪಿನಂಗಡಿ: ಯುವಕನ ಮೃತದೇಹ ಪತ್ತೆ – ಕೊಲೆ ಶಂಕೆ.!!

ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ ವ್ಯಕ್ತಿಯನ್ನು ತಲೆಗೆ ಕಲ್ಲು ಅಥವಾ ಇನ್ನಿತರ ಸಲಕರಣೆಗಳಿಂದ ಹೊಡೆದು ಕೊಲೆಗೈದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಅರ್ಧ ಕಂಬಳಿ ಹೊದಿಸಿ ಮಲಗಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸ್ವಲ್ಪ ದೂರದಲ್ಲಿ ಮೊಬೈಲ್ ಫೋನೊಂದು ಕಂಡುಬಂದಿದ್ದು, ಅದರ ಸಿಮ್ ಅನ್ನು ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಿನಂಗಡಿ | ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ

ಬಸ್ ನಿಲ್ದಾಣ ಬಳಿಯಿರುವ ಈ ನಿರ್ಮಾಣ ಹಂತದ ಕಟ್ಟಡವು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಗೆ ಸೇರಿದ್ದಾಗಿದೆ. ಗ್ರಂಥಾಲಯ ನಿರ್ಮಾಣಕ್ಕಾಗಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಮಳೆ ಇದ್ದ ಕಾರಣ ಸೋಮವಾರ, ಮಂಗಳವಾರ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ಕಾರ್ಮಿಕರು ಕೆಲಸಕ್ಕೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Related posts

Leave a Comment