ಮಂಗಳೂರು ಮಾರ್ಚ್ 06; ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವಲ್ ರಾಜ್ಯಸರಕಾರವನ್ನು ಆಗ್ರಹಿಸಿದರು .
ಮಂಗಳೂರಿನಲ್ಲಿ ಮಾತನಾಡಿದ ಅವರು ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳಾಗಿದೆ ಅಲ್ಲದೆ ಫರಂಗಿಪೇಟೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಿದೆ. ಇದು ಪೋಲಿಸರ ವೈಫಲ್ಯವೋ ಗೊತ್ತಿಲ್ಲ. ಇದು ಬಹಳ ಗಂಭೀರ ಮತ್ತು ಆಘಾತಕಾರಿ ವಿಚಾರ ಆಗಿದೆ ಎಂದರು. ಸದ್ಯ ಈ ಪ್ರಕರಣವನ್ನು ಪೊಲೀಸರಿಗೆ ಭೇದಿಸಲು ಆಗಿಲ್ಲ ಹೀಗಾಗಿ ಈ ಪ್ರಕರಣವನ್ನು ಸಿಐಡಿ, ಸಿಬಿಐ ತನಿಖೆಗೆ ನೀಡಲಿ ಎಂದರು.
ಎಸ್ ಇಝೆಡ್ ಅಧಿಕಾರಿಗಳು ನೆಲ್ಲಿದಡಿಗುತ್ತು ದೈವದ ಆಚರಣೆ ಅಡ್ಡಿ ಪಡಿಸುತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದ ಆರಾಧನೆಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂದರು.
ಆ ದೈವಸ್ಥಾನಕ್ಕೆ ಸೇರಿದ ಐದುವರೆ ಎಕರೆ ಭೂಮಿ ಕುಟುಂಬಕ್ಕೆ ನೀಡಬೇಕು. ಕೇಂದ್ರ ಸರ್ಕಾರಕ್ಕೆ ಇದಕ್ಕೆ ಸಂಬಂಧಪಟ್ಟವರಿಗೆ ಮನವಿ ಮಾಡ್ತೇವೆ ಎಂದರು. ಅಲ್ಲದೆ ನೆಲ್ಲಿದಡಿ ಗುತ್ತು ಹೋರಾಟ ಸಮಿತಿಯೊಂದಿಗೆ ವಿಎಚ್ ಪಿ ಇರಲಿದೆ ಎಂದರು. ಈ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಇಝಡ್ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಲಿ. ಅದು ಬಿಟ್ಟು ಸಂಘರ್ಷಕ್ಕೆ ಅವಕಾಶ ಮಾಡಿ ಕೊಡಬೇಡಿ ಎಂದರು. ತುಳುವರ ಮೂಲ ಶಕ್ತಿಯಾಗಿದೆ ದೈವಾರಾದನೆ. ತುಳುವರ ನಂಬಿಕೆಗೆ ನೋವು ಉಂಟು ಮಾಡಿದ್ರೆ ತುಳುನಾಡಿನ ಜನತೆ ಸುಮ್ಮನಿರಲ್ಲ ಎಂದು ಎಚ್ಚರಿಸಿದರು.