
ಬಂಟ್ವಾಳ: ಇಡಿ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ವಂಚಿಸಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲ್ಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ರಿಜಿಸ್ಟ್ರೇಶನ್ ಹೊಂದಿದ ಎರ್ಟಿಗಾ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ.
ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದ್ದಾರೆ. ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿ, ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.