Mangalore and Udupi news
ದಕ್ಷಿಣ ಕನ್ನಡಮಂಗಳೂರು

ಮಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರತೀ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆ ಮಾಡಿ ಆಯ್ಕೆಯಾದ ಪ್ರತಿ ಮಕ್ಕಳಿಗೆ 10,000 ರೂ.ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 8 ರಿಂದ 18 ವರ್ಷದೊಳಗಿರಬೇಕು.ಜನನ ಪ್ರಮಾಣ ಪತ್ರವನ್ನು ಗಜೆಟೆಡ್ ಅಧಿಕಾರಿಯಂದ ದೃಢೀಕರಿಸಲ್ಪಟ್ಟಿರಬೇಕು.

ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ಪಡೆದ ಮಕ್ಕಳಿಗೆ ಮತ್ತೊಮ್ಮೆ ಪ್ರಶಸ್ತಿ ನೀಡಲು ಅವಕಾಶರುವುದಿಲ್ಲ. ಪ್ರಶಸ್ತಿಗೆ ಆಯ್ಕೆ ಮಾಡುವಂತಹ ಮಕ್ಕಳು ಅಪ್ರತಿಮ ಸಾಧನೆ ಮಾಡಿರಬೇಕು, ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು.

ಪ್ರಸ್ತಾವನೆಯನ್ನು ಅ.8ರೊಳಗೆ ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀ ಶಕ್ತಿ ಭವನ, ಎರಡನೇ ಮಹಡಿ ಮೆಸ್ಕಾಂ ಬಳಿ ಬಿಜೈ ಮಂಗಳೂರು ಇಲ್ಲಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ನಮೂನೆಗಾಗಿ ದೂ.ಸಂ: 0824-2451254ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

Leave a Comment