ಕಾರ್ಕಳ : ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರ ಮೇಲೆ ಜಾಮೀನು ರಹಿತ ಕೇಸ್ ದಾಖಲಿಸಿದ್ದು, ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ಸುಳ್ಳು ಕೇಸುಗಳನ್ನು ದಾಖಲಿಸುತ್ತಾ ಇರುವುದನ್ನು ಪ್ರಶ್ನಿಸಲು ಹಿಂಜಾವೇ ಹಮ್ಮಿಕೊಂಡಿದ್ದ ಪ್ರತಿಭಟನಾ ಕರೆಯನ್ನು ನೋಡಿ ಬೆದರಿದ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯು ತನ್ನ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಹರಸಾಹಸಪಡುತ್ತಿದ್ದು, ಈಗ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿಯವರ ಮೇಲೆ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.
ಸೋಮವಾರ ಬೆಳ್ಳಿಗೆ 10 ಗಂಟೆಗೆ ಜಿಲ್ಲಾ SP ಕಚೇರಿ ಗೆ ಮುತ್ತಿಗೆ:
ಹಲವು ದಿನಗಳಗಳಿಂದ ಸುಮಾರು 45ಕ್ಕೂು ಅಧಿಕ ಹಿಂದೂ ಕಾರ್ಯಕರ್ತರ ವಿರುದ್ಧ ಸುಖಸುಮ್ಮನೆ ಸುಳ್ಳು ಕೇಸ್ ದಾಖಲಿಸುವ ಮೂಲಕ ಪೊಲೀಸ್ ಇಲಾಖೆ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಆಯೋಜಿಸಿತ್ತು. ಸದ್ಯ ಪ್ರತಿಭಟನೆ ಕರೆಗೆ ಬೆದರಿದ ಪೊಲೀಸ್ ಇಲಾಖೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರ ವಿರುದ್ಧವೂ ಜಾಮೀನು ರಹಿತ ಕೇಸ್ ದಾಖಲಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ. ನ.25ರಂದು ನಡೆಯುವ ಪ್ರತಿಭಟನೆ ಇನ್ನಷ್ಟು ಉಗ್ರ ರೀತಿಯಲ್ಲಿ ನಡೆಯಲಿದೆ ಎಂದು ಎಚ್ಚರಿಕೆಯನ್ನೂ ನೀಡಿದೆ.