Mangalore and Udupi news
ಅಪಘಾತದೇಶ- ವಿದೇಶಪ್ರಸ್ತುತ

ಬಸ್ ಡಿಕ್ಕಿ ಹೊಡೆದು ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು

Advertisement

ಆಲಪ್ಪುಳ: ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್‌ಕೋಡ್ ನಲ್ಲಿ ಸಂಭವಿಸಿದೆ.

ಕೆಎಸ್‌ಆರ್‌ಟಿಸಿ ಸೂಪರ್-ಫಾಸ್ಟ್ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಡಿ. 3ರ ಸೋಮವಾರ ರಾತ್ರಿ ಸುಮಾರು 10 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ತೀವ್ರ ಮಳೆ ಅಥವಾ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿದೆ.

ವಿದ್ಯಾರ್ಥಿಗಳಲ್ಲದೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರಿಗೂ ಗಾಯಗಳಾಗಿವೆ. ಮೃತಪಟ್ಟವರು ಅಲಪ್ಪುಳ ವಂದನಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮೃತರನ್ನು ಶ್ರೀದೀಪ್ (ಪಾಲಕಾಡ್), ಮುಹಮ್ಮದ್ ಇಬ್ರಾಹಿಂ, ದೇವಾನಂದ್ (ಲಕ್ಷದ್ವೀಪ), ಮುಹಮ್ಮದ್ ಜಬ್ಬಾರ್ (ಕಣ್ಣೂರು) ಮತ್ತು ಆಯುಷ್ ಶಾಜಿ (ಆಲಪ್ಪುಳ) ಎಂದು ಗುರುತಿಸಲಾಗಿದೆ.

ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಕಾರಿನ ಜಖಂಗೊAಡ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಟ್ಟಿಂಗ್ ಮೆಶೀನ್‌ಗಳನ್ನು ಬಳಸಿದ್ದಾರೆ. ತೀವ್ರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ವಂದನಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಂದನಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ರಾತ್ರಿ ಸಿನಿಮಾಕ್ಕೆ ತೆರಳಲು ಕಾರಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ 11 ಮಂದಿ ಇದ್ದರು. ಅವರಲ್ಲಿ ಐವರು ಸಾವನ್ನಪ್ಪಿದ್ದಾರೆ. ಆರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

Related posts

Leave a Comment