Mangalore and Udupi news
ದೇಶ- ವಿದೇಶಪ್ರಸ್ತುತರಾಜ್ಯ

ಮನಮೋಹನ್ ಸಿಂಗ್ ಇನ್ನಿಲ್ಲ: ಶನಿವಾರ ನಡೆಯಲಿದೆ ಅಂತ್ಯಕ್ರಿಯೆ

ದೇಶದ ಖ್ಯಾತ ಆರ್ಥಿಕ ತಜ್ಞ ಎರಡು ಬಾರಿ ದೇಶದ ಪ್ರಧಾನಿಯಾಗಿ ದೇಶ ಮುನ್ನೆಡೆಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧರಾಗಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಶುಕ್ರವಾರ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ.

Manmohan Singh, former Indian prime minister, 1932-2024

ಅವರಿಗೆ 92 ವರ್ಷ ವಯಸ್ಸಾಗಿತ್ತು. “ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ನಾಳೆಯ ದಿನ ನಡೆಯಲಿದೆ. ನಾವು ಅಧಿಕೃತವಾಗಿ ಘೋಷಿಸುತ್ತೇವೆ..” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಡಾ. ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಮತ್ತು ದೇಶದ ನಿಜವಾದ ಐಕಾನ್ ಆಗಿದ್ದರು. ಸ್ವಾತಂತ್ರ್ಯ ನಂತರದ ಹೀರೋ. ಅವರ ಧ್ಯೇಯ ಮತ್ತು ದೇಶವನ್ನು ಆಳುವ ಸಾಮರ್ಥ್ಯ ಎಲ್ಲರಿಗೂ ಸಾಕ್ಷಿಯಾಗಿದೆ…” ಎಂದು ವೇಣುಗೋಪಾಲ್ ಹೇಳಿದರು.

Manmohan Singh death: Government declares 7-day mourning; ex-PM's last rites on Saturday | 10 updates | Latest News India - Hindustan Times

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ಕರ್ನಾಟಕ ಸರ್ಕಾರ ಡಿಸೆಂಬರ್ 27 ರಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

ಡಿಸೆಂಬರ್ 28 ರಂದು ನಡೆಯಲಿರುವ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್ ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದರು. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಏಮ್ಸ್ ನಿಂದ ಗುರುವಾರ ತಡರಾತ್ರಿ 3 ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸಕ್ಕೆ ತಲುಪಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.

Manmohan Singh dies updates: Former PM to be cremated with full state honours - India Today

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಡಾ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಬೆಳಗಾವಿಯಿಂದ ದೆಹಲಿಗೆ ಹಿಂತಿರುಗಿ ಗೌರವ ಸಲ್ಲಿಸಿದರು.

Photo Gallery : Prime Minister of India - Dr. Manmohan Singh (May 22, 2004 - 26th May 2014)

2004 ರಿಂದ 2014ರವರೆಗಿನ ಯುಪಿಎ ಮೊದಲ ಹಾಗೂ ಎರಡನೇ ಅವಧಿಯಲ್ಲಿ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಡಾ.ಮನಮೋಹನ್‌ ಸಿಂಗ್‌ 1991ರಿಂದ ರಾಜ್ಯಸಭಾ ಸದಸ್ಯರಾಗಿ ಕಳೆದ ವರ್ಷವಷ್ಟೇ ನಿವೃತ್ತಿಯಾಗಿದ್ದರು. ಪಿ.ವಿ.ನರಸಿಂಹ ರಾವ್‌ ಪ್ರಧಾನಿಯಾಗಿದ್ದಾಗ 1991ರಲ್ಲಿ ರಾಜ್ಯಸಭಾ ಸದಸ್ಯರಾಗಿ ಹಣಕಾಸು ಸಚಿವರಾಗಿ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದರು. ಮೇಲ್ಮನೆಯಲ್ಲಿ ಐದು ಬಾರಿ ಅಸ್ಸಾಂ ಅನ್ನು ಪ್ರತಿನಿಧಿಸಿದರು.

Advertisement

Related posts

Leave a Comment