Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಮುಂಬಯಿಯಲ್ಲಿ ಅರೆಸ್ಟ್‌.!!

ಬಂಟ್ವಾಳ : ವಂಚನೆ ಪ್ರಕರಣದ ಆರೋಪಿಯಾಗಿದ್ದು, ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮುಂಬಯಿಯಲ್ಲಿ ಬಂಧಿಸಿ‌ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುತ್ತೂರು ತಾಲೂಕಿನ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್ ಎಂಬಾತನ್ನು ಬಂಧಿಸಲಾಗಿದ್ದು, ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವಂಚನೆ ಪ್ರಕರಣಗಳು ದಾಖಲಾಗಿವೆ.

ವಂಚನೆ ಸಹಿತ ಇನ್ನಿತರ ಪ್ರಕರಣಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿದ್ದು, ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಇದೀಗ ಆರೋಪಿಯನ್ನು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ , ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಪೋಲೀಸ್ ಉಪನಿರೀಕ್ಷಕರುಗಳಾದ ರಾಮಕೃಷ್ಣ, ಕಲೈಮಾರ್, ದುರ್ಗಪ್ಪ, ಗೋಪಾಲ‌ಅವರ ನೇತ್ರತ್ವದಲ್ಲಿ ಎ.ಎಸ್.ಐ.ಸುಜು, ಹೆಚ್.ಸಿ. ಜಗದೀಶ್ ಅವರು ಮಾಹಿತಿ ಸಂಗ್ರಹಿಸಿ ಮಹಾರಾಷ್ಟ್ರದ ಮುಂಬಯಿ ಎಂಬಲ್ಲಿಗೆ ತೆರಳಿ ಬಂಧಿಸಿದ್ಧಾರೆ.

Related posts

Leave a Comment