Mangalore and Udupi news
ದೇಶ- ವಿದೇಶರಾಜಕೀಯರಾಜ್ಯ

70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ- ಕೇಂದ್ರ ಮಹತ್ವದ ನಿರ್ಧಾರ

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ 5 ಲಕ್ಷ ರೂ. ಆರೋಗ್ಯ ರಕ್ಷಣೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

Related posts

Leave a Comment