- ಲವ್ ಜಿಹಾದ್ ಆರೋಪ
- 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಇಬ್ಬರು ಯುವಕರು ಪ್ರೀತ್ಸೆ.. ಪ್ರೀತ್ಸೆ ಎಂದು ಹಿಂದೆ ಬಿದ್ದು ಹಿಂಸೆ ನೀಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ.
9ನೇ ತರಗತಿ ಓದುತ್ತಿದ್ದ ಖುಷಿ ಆತ್ಮಹತ್ಯೆಗೆ ಶರಣಾದ ಬಾಲಕಿ. ವಿದ್ಯಾರ್ಥಿಗಳಾದ 18 ವರ್ಷದ ಮುತ್ತುರಾಜ್ ಮ್ಯಾಗೇರಿ ಹಾಗೂ 19 ವರ್ಷದ ಜುನೇದಸಾಬ್ ಕಂದಗಲ್ ಅವರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಇಬ್ಬರು ಸೇರಿ ಈ ಖುಷಿಯನ್ನು ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ವಾರ್ನಿಂಗ್ ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್ ನೀಡುತ್ತಿದ್ದರು. ಈ ಟಾರ್ಚರ್ನಿಂದ ಬೇಸತ್ತು ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಎಂದು ಕುಟುಂಬಸ್ಥರು ದೂರಿದ್ದಾರೆ.
ವಿದ್ಯಾರ್ಥಿಗಳಾದ ಜಿನೇದಸಾಬ್ ಹಾಗೂ ಮುತ್ತುರಾಜ್ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ರೋಣ ಸಿಪಿಐ ಹಾಗೂ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕಳಕಪ್ಪ ಬಂಡಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಒಟ್ಟಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
