Mangalore and Udupi news
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ – ದಂಪತಿ ಸ್ಥಳದಲ್ಲೇ ಸಾವು.!!

ಗದಗ : ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಭೈರನಹಟ್ಟಿ ಗ್ರಾಮದ ಬಳಿ ನ.06 ಬುಧವಾರ ನಡೆದಿದೆ.

ಮೃತರನ್ನು ಬಾಗಲಕೋಟೆಯ ಸಿದ್ದರಾಮ ಹಾಗೂ ಹೇಮಾ ಎಂದು ಗುರುತಿಸಲಾಗಿದೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿದ್ದು, ಅವರನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬುಧವಾರ ಬೆಳಿಗ್ಗೆ ಅಪಘಾತ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು,  ಮಕ್ಕಳಿಬ್ಬರು ಗಂಭೀರ » Vijaya Sakshi News

ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಲಾರಿ, ಬಾಗಲಕೋಟೆಗೆ ಹೊರಟ್ಟಿದ್ದ ಕಾರು ಇದಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment