Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

30ಕಿಲೋ ಗಾಂಜಾ ಸಹಿತ ಓರ್ವ ಅರೆಸ್ಟ್ – ಇಬ್ಬರು ಪರಾರಿ.!!

ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಸುಮಾರು 30 ಕಿಲೋ ಗಾಂಜಾವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುನಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪೆರಿಯ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ.

ಗಾಂಜಾವನ್ನು ಪ್ಲಾಸ್ಟಿಕ್ ಕವರ್ ಗಳಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Advertisement

Related posts

Leave a Comment