Mangalore and Udupi news
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕೆಜಿಗಟ್ಟಲೆ ಗಾಂಜಾ ಸಹಿತ ಇಬ್ಬರು ಅರೆಸ್ಟ್.!

ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ ಬಂಗಾಳದ ದಿಲ್‌ದಾರ್ ಆಲಿ (28) ಎಂದು ಗುರುತಿಸಲಾಗಿದೆ.

ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ಸಮೀಪದ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 2,60,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತು ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 3 ಲಕ್ಷ ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಒರಿಸ್ಸಾದಿಂದ ಗಾಂಜಾವನ್ನು ಖರೀದಿಸಿಕೊಂಡು ಬೆಂಗಳೂರಿಗೆ ರೈಲಿನಲ್ಲಿ ತಂದು ಅಲ್ಲಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಾಟ ಮಾಡಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಆರೋಪಿಗಳು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್‌ರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ., ಎಸ್ಸೈ ಶರಣಪ್ಪಭಂಡಾರಿ ಮತ್ತಿತರರು ಪಾಲ್ಗೊಂಡಿದ್ದರು.

Related posts

Leave a Comment