ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶ ವ್ಯಾಪಿ ಸುದ್ದಿಯಾಗಿದೆ.
ಇದೇ ವಿಷಯ ಇದೀಗ ರಾಜಕೀಯ ವಾಕ್ ಸಮರಕ್ಕೂ ವೇದಿಕೆ ಆಗಿದೆ. ಈ ಮಧ್ಯೆ ಇತ್ತ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.
ಮುಜರಾಯಿ & ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.