Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜಕೀಯರಾಜ್ಯ

‌ಮುಡಾ ಹಗರಣ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ.!!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.

Related posts

Leave a Comment