
ರಾಜ್ಯದಲ್ಲಿ ಚಳಿ ಆರಂಭಗೊಂಡಿದ್ದು, ಈ ನಡುವೆ ಮತ್ತೆ ಮಳೆರಾಯ ಬರಲಿದ್ದಾನೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.