ಕುಂದಾಪುರ : ರಾತ್ರಿ ವೇಳೆ ಕಾಡುಪ್ರಾಣಿಗಳ ಹತ್ಯೆಗೆ ಸಂಚು ರೂಪಿಸಿ ಅರಣ್ಯ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ವಂಡಾರು ಬಳಿ ನಡೆದಿದೆ.
ಭಟ್ಕಳ ಮುಂಡಳ್ಳಿಯ ಮೊಹಮ್ಮದ್ ಅಶ್ರಫ್(23), ಶಿರೂರು ಮೂಲದವರಾದ ವಾಸೀಂ ಅಕ್ರಂ (34), ಅಲಿ ಬಾಪು ಯಾಸಿನ್ (36) ಬಂಧಿತ ಆರೋಪಿಗಳು.
ಬಂಧಿತರಿಂದ ಒಂದು ಬಂದೂಕು, 11 ಕಾಡತೂಸು 4 ಹರಿತವಾದ ಚಾಕುಗಳು, ಒಂದು ಮಾಂಸ ಮಾಡಲು ಉಪಯೋಗಿಸುವ ಮಚ್ಚು, ಟಾರ್ಚ್ ಹಾಗೂ ಮೂರು ಮೊಬೈಲ್ ಫೋನ್ ಸಹಿತ ಆರೋಪಿಗಳು ಬಳಸಿದ್ದ ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
