Mangalore and Udupi news
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪುಣ್ಯಸ್ನಾನ

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ.


144 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು, ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ವಿಶೇಷ ಪೂಜೆ ನೆರವೇರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಬ್ರಿಜೇಶ್ ಚೌಟ ಪುಣ್ಯಸ್ನಾನ

“ಪ್ರಯಾಗ್‌ರಾಜ್‌ನ ಈ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನನಗೆ ಸೌಭಾಗ್ಯ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ. ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಮರೆಯಲಾಗದ ಅದ್ಬುತ ಆಧ್ಯಾತ್ಮಿಕ ಅನುಭವ. ಈ ಪುಣ್ಯಸ್ನಾನದಿಂದ ನವ ಚೈತನ್ಯ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಧಾರ್ಮಿಕ-ಆಧ್ಯಾತ್ಮಿಕ-ಸಾಂಸ್ಕೃತಿಕ ಸಂಗಮ ಮಹಾ ಕುಂಭಮೇಳವನ್ನು ಅಚ್ಚುಕಟ್ಟಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಲ್ಲಿಗೆ ಬರುತ್ತಿರುವ ಕೋಟ್ಯಂತರ ಭಕ್ತಾದಿಗಳಿಗೆ ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ” ಎಂದು ಕ್ಯಾ. ಚೌಟ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

Related posts

Leave a Comment