ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 ಅತ್ಯಾಧುನಿಕ ವಿಮಾನಗಳು ಮೇಕ್ ಇನ್ ಇಂಡಿಯಾ ಅಡಿ ದೇಶದಲ್ಲೇ ತಯಾರಾಗಲಿದೆ.
ಗುಜರಾತ್‌ನ ವಡೋದರಾದಲ್ಲಿ ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಜಂಟಿಯಾಗಿ ಲೋಕಾರ್ಪಣೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಮೋದಿ, ಟಾಟಾ-ಏರ್‌ಬಸ್ ಉತ್ಪಾದನಾ ಸೌಲಭ್ಯವು ಭಾರತ-ಸ್ಪೇನ್ ಸಂಬಂಧಗಳನ್ನು ಮತ್ತು ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ವಿಷನ್ ಅನ್ನು ಬಲಪಡಿಸುತ್ತದೆ. ವಡೋದರಾ ಸೌಲಭ್ಯದಲ್ಲಿ ತಯಾರಾದ ವಿಮಾನಗಳನ್ನು ಭವಿಷ್ಯದಲ್ಲಿ ರಫ್ತು ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರತನ್ ಟಾಟಾ ಅವರನ್ನು ಸ್ಮರಿಸಿದ ಮೋದಿ, ನಾನು ಟಾಟಾ ಮತ್ತು ಏರ್‌ಬಸ್ ತಂಡಗಳನ್ನು ಅಭಿನಂದಿಸುತ್ತೇನೆ. ಕೆಲ ದಿನಗಳ ಹಿಂದೆ ನಮ್ಮ ದೇಶ ರತನ್ ಟಾಟಾ ಅವರನ್ನು ಕಳೆದುಕೊಂಡಿದೆ. ಇಂದು ಟಾಟಾ ನಮ್ಮೊಂದಿಗೆ ಇದ್ದಿದ್ದರೆ ಅವರು ತುಂಬಾ ಸಂತೋಷವಾಗಿರುತ್ತಿದ್ದರು. ಎಲ್ಲಿಯೇ ಇದ್ದರೂ ಅವರ ಆತ್ಮ ಸಂತೋಷವಾಗಿರುತ್ತದೆ.
ಈ ಕಾರ್ಖಾನೆಯು ನವ ಭಾರತದ ಕೆಲಸದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.ವಿಮಾನ ಪ್ರೇಮಿ ಆಗಿದ್ದ ರತನ್ ಟಾಟಾ ಅವರು ಈ ಯೋಜನೆ ಕನಸು ಕಂಡಿದ್ದರು. 2012ರಲ್ಲೇ ಟಾಟಾ ಅವರು ಏರ್‌ಬಸ್ ಜೊತೆ ಸಂಬಂಧ ಬೆಳೆಸಲು ಮುಂದಾಗಿದ್ದರು. 12 ವರ್ಷದ ಬಳಿಕ ರತನ್ ಟಾಟಾ ಅವರ ಕನಸು ಈಗ ನನಸಾಗಿದೆ. ಅಕ್ಟೋಬರ್ 2022 ರಲ್ಲಿ ಈ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು.
2021 ರಲ್ಲಿ ರಕ್ಷಣಾ ಸಚಿವಾಲಯವು C-295 56 ವಿಮಾನಗಳ ಪೂರೈಕೆಗಾಗಿ ಸ್ಪೇನ್‌ನ ಏರ್‌ಬಸ್ ಡಿಫೆನ್ಸ್ ಮತ್ತು ಸ್ಪೇಸ್ ಎಸ್‌ಎ ಜೊತೆ 21,935 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿತ್ತು. ಇದರಲ್ಲಿ 16 ವಿಮಾನಗಳು ಸ್ಪೇನ್‌ನಿಂದ ಬರಲಿದ್ದು, ಉಳಿದ 40 ಭಾರತದಲ್ಲಿ ಉತ್ಪಾದನೆಯಾಗಬೇಕು ಎಂದು ಒಪ್ಪಂದದಲ್ಲಿ ಷರತ್ತು ವಿಧಿಸಲಾಗಿತ್ತು.
ಮೊದಲ ವಿಮಾನ 2026ರ ಸೆಪ್ಟೆಂಬರ್‌ನಲ್ಲಿ ನಿರ್ಮಾಣ ಆಗಿ ವಾಯುಪಡೆ ಸೇರ್ಪಡೆಯಾಗಲಿದ್ದು ಉಳಿದ 39 ವಿಮಾನಗಳು 2031ರೊಳಗೆ ನಿರ್ಮಾಣ ಆಗಲಿವೆ. ಈಗಾಗಲೇ ಬರಬೇಕಾಗಿದ್ದ 16 ವಿಮಾನಗಳ ಪೈಕಿ 6 ವಿಮಾನಗಳು ಸ್ಪೇನ್‌ನಿಂದ ಬಂದಿವೆ. 2025ರ ಆಗಸ್ಟ್ ಒಳಗೆ ಉಳಿದ 10 ವಿಮಾನ ಭಾರತಕ್ಕೆ ಆಗಮಿಸಲಿವೆ.
Modi, Spain’s Sanchez launch India’s first private military aircraft plant
ndian Prime Minister Narendra Modi and his Spanish counterpart Pedro Sanchez have inaugurated India’s first private military aircraft plant, boosting New Delhi’s ambitions of growing local manufacturing in its defence and aerospace industries.
Sanchez was welcomed to India on Monday with a flower-filled open-top parade alongside Modi, as Madrid seeks to boost investment in the world’s fifth-largest economy.