ಇಸ್ರೇಲ್ ಸೇನೆಯು ಸೆಂಟ್ರಲ್ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿ ಸುಮಾರು 117 ಮಂದಿ ಗಾಯಗೊಂಡಿದ್ದಾರೆ.
ಇಸ್ರೇಲ್ ಸೇನೆ ನಡೆಸಿದ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಜೊತೆಗೆ ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯ ಉಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಇನ್ನು ಕಳೆದ 1 ವರ್ಷದಲ್ಲಿ ಇಸ್ರೇಲ್ ನಡೆಸಿದ ಮಾರಣಾಂತಿಕ ದಾಳಿಗಳಲ್ಲಿ ಇದು ಒಂದು ಎಂದು ಹೇಳಲಾಗುತ್ತಿದೆ.
ಈ ದಾಳಿ ಕುರಿತು ಸ್ಪೇನ್ ಹಾಗೂ ಇಟಲಿ ದೇಶಗಳು ಆಕ್ರೋಶ ಹೊರಹಾಕಿದ್ದು, ಸೆಂಟ್ರಲ್ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನ ಹೊಡೆದುರುಳಿಸಿದ ನಂತರ ಉನ್ನತ ಅಧಿಕಾರಿಗಳ ಸರಣಿ ಹತ್ಯೆಯನ್ನೇ ಹೆಚ್ಚಾಗಿ ಗುರಿಯಾಗಿಸಿದೆ. ಆದ್ರೆ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತಾಧಿಕಾರಿ ಬದುಕುಳಿದಿದ್ದಾರೆ. ಈ ದಾಳಿಯು ಅಂತಾರಾಷ್ಟ್ರೀಯ ಕಾ ನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿವೆ.
Israeli strikes hit central area of Lebanon’s Beirut, killing 22
Israeli strikes on a densely populated Beirut neighborhood killed at least 22 people and injured dozens, Lebanese authorities said. A senior Hezbollah official survived the attack, according to a source in the militant group.