Mangalore and Udupi news
ಉದ್ಯೋಗಪ್ರಸ್ತುತರಾಜ್ಯ

ಕೆಲಸ ಹುಡುಕುವವರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ.!!

ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಕಡೆಗೂ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಬರೋಬ್ಬರಿ 1 ಲಕ್ಷ ಉದ್ಯೋಗ ಸೃಷ್ಟಿಸಲು ಮುಂದಾಗಿದೆ. ಅದಕ್ಕಾಗಿ ನಾಲೆಡ್ಜ್-ಹೆಲ್ತ್ ಸಿಟಿ ನಿರ್ಮಿಸುತ್ತಿದ್ದು, ಇದೇ ಸೆ.26ಕ್ಕೆ ಸಿಎಂ‌ ಸಿದ್ದರಾಮಯ್ಯರಿಂದ ಚಾಲನೆ ದೊರಕಲಿದೆ.

ನಾಲೆಡ್ಜ್-ಹೆಲ್ತ್ ಸಿಟಿ ನಿರ್ಮಾಣದ ಸುದ್ದಿ ಕೇಳಿ ಹಲವು ಉದ್ಯಮಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ₹40,000 ಕೋಟಿ ಹೂಡಿಕೆಯ ಯೋಜನೆ ಇದಾಗಿದ್ದು, 2000 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಕೆಎಚ್ಐಆರ್-ನಾಲೆಡ್ಜ್-ಹೆಲ್ತ್-ಇನ್ನೋವೇಶನ್-ರೀಸರ್ಚ್ ಸಿದ್ಧಗೊಳ್ಳಲಿದೆ.

ಇದರ ಮೂಲಕ ಸರ್ಕಾರ ಬರೋಬ್ಬರಿ 1 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದೆ. ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮೊದಲ ಹಂತದಲ್ಲಿ 500 ಎಕರೆಯಲ್ಲಿ ಸಿಟಿ ನಿರ್ಮಾಣಗೊಳ್ಳಲಿದೆ.

ಬೆಂಗಳೂರಿನಲ್ಲಿ ಈಗಾಗಲೇ ಹೈಟೆಕ್ ಸಿಟಿ ನಿರ್ಮಾಣವಾಗುತ್ತಿದೆ. ಅದರಂತೆಯೇ ಸಿಂಗಪುರದ ಬಯೊಪೋಲಿಸ್, ರೀಸರ್ಚ್ ಟ್ರ್ಯಾಂಗಲ್ ಪಾರ್ಕ್, ಸೈನ್ಸ್ ಪಾರ್ಕ್, ಕೆಬಿಐಸಿ, ಅಮೆರಿಕದ ಬೋಸ್ಟನ್​​​ ಇನ್ನೋವೇಶನ್ ಕ್ಲಸ್ಟರ್ ಮಾದರಿಯಲ್ಲಿ ನಿರ್ಮಾಗೊಳ್ಳಲಿದೆ.

ಎಲೆಕ್ಟ್ರಾನಿಕ್ ಸಿಟಿಯ ಮಾನದಂಡಗಳನ್ನೂ ಇಟ್ಟುಕೊಳ್ಳಲಾಗಿದೆ. ದೊಡ್ಡಬಳ್ಳಾಪುರ- ದಾಬಸ್​ಪೇಟೆ ನಡುವೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ಕಿ.ಮೀ. ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ.

ಶಿಕ್ಷಣ, ಆರೋಗ್ಯ, ನಾವೀನ್ಯತೆ & ಸಂಶೋಧನೆಯ ಪ್ರಮುಖ ಗುರಿ ಹೊಂದಿದೆ. ಜೀವವಿಜ್ಞಾನಗಳು, ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್​​ ಮ್ಯಾನುಫ್ಯಾಕ್ಚರಿಂಗ್ ಮತ್ತು ವೈಮಾಂತರಿಕ್ಷ, ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಿಗೆ ಇಲ್ಲಿ ಆದ್ಯತೆ ನೀಡಲಾಗುತ್ತದೆ.

ಜಾಗತಿಕ ಮಟ್ಟದ ಉತ್ಕೃಷ್ಟ ವಿ.ವಿ.ಗಳು, ಸಂಶೋಧನಾಲಯಗಳು. ಆಸ್ಪತ್ರೆಗಳು ಮತ್ತು ಕಂಪನಿಗಳು ಕೆಎಚ್ಐಆರ್ ಸಿಟಿಯಲ್ಲಿ ನೆಲೆಯೂರಲಿವೆ. ಕೆಎಚ್ಐಆರ್ ಸಿಟಿಯಲ್ಲಿ ವಿಖ್ಯಾತ ಕಂಪನಿಗಳ ಆರ್ & ಡಿ ಕೇಂದ್ರಗಳು. ಗ್ಲೋಬಲ್ ಕೆಪಾಸಿಟಿ ಸೆಂಟರುಗಳು ಬರಲಿವೆ.

ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಡಾ.ದೇವಿಶೆಟ್ಟಿ, ಕಿರಣ್ ಮಜುಂದಾರ್ ಷಾ, ಪ್ರಶಾಂತ ಪ್ರಕಾಶ, ಥಾಮಸ್ ಓಶಾ, ರಾಂಚ್ ಕಿಂಬಾಲ್, ಮೋಹನದಾಸ್ ಪೈ, ನಿಖಿಲ್ ಕಾಮತ್ ಮುಂತಾದ ಖ್ಯಾತನಾಮರನ್ನು ಒಳಗೊಂಡ ಸಲಹಾ ಸಮಿತಿ ರಚಿಸಲು ಮುಂದಾಗಿದೆ. ಪ್ರತಿ ಎಕರೆಗೆ 100 ಜನರ ವಸತಿ ಇರುವಂತೆ ನೋಡಿಕೊಳ್ಳುವ ಗುರಿ ಹೊಂದಿದೆ.

ಕೆಎಚ್ಐಆರ್ ಸಿಟಿಯಲ್ಲಿ ಜಗತ್ತಿನ ಅಗ್ರಮಾನ್ಯ 500 ಶಿಕ್ಷಣ ಸಂಸ್ಥೆಗಳು ಇರಲಿವೆ. ಸ್ಥಳೀಯ ಕ್ಯಾಂಪಸ್ ಬರಲು ಇನ್ನು ಸಹಕಾರಿಯಾಗಲಿದೆ. ವೈದ್ಯಕೀಯ ಪ್ರವಾಸೋದ್ಯಮ ಇತ್ಯಾದಿಗಳಿಗೂ ಹೇರಳ ಅವಕಾಶ ಸೃಷ್ಟಿಯಾಗಲಿದೆ.

Related posts

Leave a Comment