
ಕಾರ್ಕಳ: ಎಂಬಿಎ ವಿದ್ಯಾರ್ಥಿಯೋರ್ವ ವಿದ್ಯಾಭ್ಯಾಸ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜ.19ರಂದು ರಾತ್ರಿ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಕೆ.ಸುಧಾಕರ ಎಂಬವರ ಪುತ್ರ ಕೆ.ವೆಂಕಟೇಶ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಮಂಗಳೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಇವರು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿರುವ ಬಗ್ಗೆ ತಂದೆಯನ್ನು ಹೇಳುತ್ತಿದ್ದನು.
ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಅವರು ಮನೆಯ ಹಿಂದುಗಡೆ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.