ಕಾರ್ಕಳ: ಖಚಿತ ಮಾಹಿತಿ ಮೇರೆಗೆ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಸಾಣೂರು ಎಂಬಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ದೊರೆತು ಕಾರ್ಕಳ ಪೊಲೀಸ್ ಪ್ರಭಾರ ವೃತ್ತ ನಿರೀಕ್ಷಕಿ ಜಯಶ್ರೀ ಎಸ್ ಮಾನೆ ಇವರು ದಾಳಿ ನಡೆಸಿದ್ದಾರೆ.
ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಅವಿನಾಶ್ ಕಂಪೌ0ಡ್ ಬಳಿ ಇರುವ ಪ್ರಮಿಳಾ ವಿಜಯ್ ಕುಮಾರ್ ಎಂಬ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪವಿದೆ. ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮನೆಯಲ್ಲಿ ಇದ್ದ ಭರತ್ ಎಂಬಾತನನ್ನು ಬಂಧಿಸಿ ಕೃತ್ಯಕ್ಕೆ ಸಂಬ0ಧಿಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದಾರೆ.
ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರಾದ ಪ್ರಮೀಳಾ ವಿಜಯ್ ಕುಮಾರ್ ಇವರ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.