Mangalore and Udupi news
ಅಪರಾಧಪ್ರಸ್ತುತರಾಜ್ಯ

ಈದ್ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಥಳಿತ – 5ಕ್ಕೂ ಹೆಚ್ಚು ಮಂದಿಗೆ ಗಾಯ

ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಮಧ್ಯೆ ಘರ್ಷಣೆ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಕೋಲಾರ ನಗರದ ಕ್ಲಾಕ್ ಟವರ್ ಬಳಿ ಮೆರವಣಿಗೆ ಸಾಗುವಾಗ ಮಾತಿಗೆ ಮಾತು ಬೆಳೆದು ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳಿಂದ ಒಂದು ಗುಂಪು ಥಳಿಸಿದೆ. ಸೈಯದ್ ಸಲ್ಮಾನ್, ಸೈಫ್, ಹುಸೇನ್ ಕಾಷಿಪ್, ಕಲೀಲ್ ಅಹ್ಮದ್ ಎಂಬುವರಿಗೆ ಗಾಯವಾಗಿದ್ದು, ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಯ್ಯದ್ ವಸೀಂ ಪಾಷಾ, ಥಾಹೀರ್ ಗುಂಪಿನಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು ಅರೋಪಿಗಳು ಪರಾರಿಯಾಗಿದ್ದಾರೆ. ಅರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸ್ಥಳಕ್ಕೆ ಧಾವಿಸಿದ್ದು, ಗುಂಪುಗೂಡಿದ್ದ ಜನರನ್ನು ಚದುರಿಸಿದ ಬಳಿಕ ಮೆರವಣಿಗೆ ಮುಂದೆ ಸಾಗಿದೆ.

ಗಾಯಳುಗಳು ದಾಖಲಾಗಿದ್ದ ಕೋಲಾರ ಜಿಲ್ಲಾಸ್ಪತ್ರೆಯ ಬಳಿ 300 ಕ್ಕೂ ಹೆಚ್ಚು ಜನರು ಜಮಾವಣೆ ಆಗುತ್ತಿದಂತೆ ಮುನ್ನೆಚ್ಚರಿಕೆ ವಹಿಸಿದ ಪೊಲೀಸರು ಗುಂಪನ್ನು ಚದುರಿಸಿ ಕಳುಹಿಸಿದರು. ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

Leave a Comment