ಮಂಗಳೂರು : ಮೂರು ವರ್ಷದ ಪುಟಾಣಿ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಮುದುಕನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.
ಆರೋಪಿ ಅಬ್ದುಲ್ಲಾ ಅಡಿಕೆ ಖರೀದಿ ಅಂಗಡಿ ಹೊಂದಿದ್ದು, ನವೆಂಬರ್ 21ರಂದು ಅಂಗಡಿ ಬಳಿಯಲ್ಲಿ ಆಟವಾಡುತ್ತಿದ್ದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಗು ಅಸಹಜವಾಗಿ ವರ್ತಿಸಿದ್ದರಿಂದ ಮಗುವಿನ ತಾಯಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಕೊಡಿಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ ಬಳಿಕ ಕೋಣಾಜೆ ಠಾಣೆಗೆ ತೆರಳಿ ಮಗುವಿನ ತಾಯಿ ದೂರು ನೀಡಿದ್ದಾರೆ.
ಕೊಣಾಜೆ ಪೊಲೀಸರು ಪೋಕ್ಸೋ ಕಾಯ್ದೆಯ ಸೆಕ್ಷನ್ 9, 10 ಮತ್ತು 12 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 65 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಬ್ದುಲ್ಲಾನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.