Mangalore and Udupi news
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಮೃತ್ಯು.!!

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ.

ಅಪಘಾತದಲ್ಲಿ ಒಟ್ಟು ಐವರು ಮೃತಪಟ್ಟಿದ್ದು, ಅವರಲ್ಲಿ ಅನೂಪ್ ಪೂಜಾರಿ ಸೇರಿದಂತೆ ಮೂವರು ಯೋಧರು ಕರ್ನಾಟಕದವರು ಎಂದು ತಿಳಿದುಬಂದಿದೆ.

ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಮೃತ್ಯು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿದ್ದು , ಘಟನೆಯಲ್ಲಿ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 5 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
ನಿಲಂ ಪ್ರಧಾನ ಕಛೇರಿಯಿಂದ ಎಲ್‌ಒಸಿ ಮೂಲಕ ಬನೋಯ್ ಘರೋವಾ ಪೋಸ್ಟ್‌ಗೆ ತೆರಳುತ್ತಿದ್ದ 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 5 ಸೈನಿಕರಿಗೆ ಗಂಭೀರ ಗಾಯಗಳಾಗಿವೆ.

ಈ ಘಟನೆಯಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು. ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಅನೂಪ್ ಕುಟುಂಬಕ್ಕೆ ಸೇನಾಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಕಳೆದ 13 ವರ್ಷಗಳಿಂದ ಅನೂಪ್ ಸೇನೆಯಲ್ಲಿದ್ದು 2 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ 1 ವರ್ಷದ ಮಗುವಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸರಿಗೂ ಸೇನೆಯಿಂದ ಮಾಹಿತಿ ಕಳುಹಿಸಲಾಗಿದೆ.

ವಿವಾಹಿತರಾಗಿರುವ ಅನೂಪ್ ಪತ್ನಿ, 2 ವರ್ಷದ ಹೆಣ್ಣು ಮಗು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅನೂಪ್ ಅವರು ಕಳೆದ ತಿಂಗಳು ರಜೆಯಲ್ಲಿ ಊರಿಗೆ ಆಗಮಿಸಿದ್ದವರು ಡಿ.21ರಂದು ಕರ್ತವ್ಯಕ್ಕೆ ಮತ್ತೆ ತೆರಳಿದ್ದರು. ಊರಲ್ಲಿದ್ದ ವೇಳೆ ಡಿ.15ರಂದು ಕೋಟೇಶ್ವರದಲ್ಲಿ ನಡೆದ ‘ಕೊಡಿ ಹಬ್ಬ’ದಲ್ಲೂ ಪಾಲ್ಗೊಂಡಿದ್ದ ಅನೂಪ್, ಇತ್ತೀಚೆಗೆ ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

ಡಿ.26ರಂದು ಅಂತ್ಯ ಸಂಸ್ಕಾರ. ನಾಳೆ ತೆಕ್ಕಟ್ಟೆಯಿಂದ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Related posts

Leave a Comment