Mangalore and Udupi news
Blogಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸೌತಡ್ಕ ದೇವಸ್ಥಾನದಲ್ಲಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಸುತ್ತಾಟ

ಬೆಳ್ತಂಗಡಿ: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿಯೋರ್ವಳು ಪರಾರಿಯಾಗಿ ಬಂದಿರುವ ಘಟನೆ ಸೌತಡ್ಕ ದೇವಸ್ಥಾನದಲ್ಲಿ ಬೆಳಕಿಗೆ ಬಂದಿದೆ.

ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಸಿ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

Leave a Comment