Mangalore and Udupi news
Blogರಾಜ್ಯ

ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ಚಟುವಟಿಕೆ; ಮದರಸಾ ತೆರವಿಗೆ ಜಿಲ್ಲಾಧಿಕಾರಿಗೆ ಸೂಚಿಸಲು ಕೋರಿದ ಕೇಂದ್ರ ಸರ್ಕಾರ

ಬೆಂಗಳೂರು: ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ಚಟುವಟಿಕೆ ನಡೆಯುತ್ತಿದೆ ಎಂಬ ಗಂಭೀರ ಆರೋಪದ ಮೇಲೆ ಮಸೀದಿಯಲ್ಲಿರುವ ಮದರಸಾ ತೆರವಿಗೆ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

ಶ್ರೀರಂಗಪಟ್ಟಣದ ಜುಮ್ಮಾ ಮಸೀದಿಯಲ್ಲಿರುವ ಮದರಸಾದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದನ್ನು ಪ್ರಶ್ನಿಸಿ ಕನಕಪುರದ ಕಬ್ಬಾಳುವಿನ ಅಭಿಷೇಕ್ ಗೌಡ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಾಲಯದ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

Jumma Masjid / Masjid-e-Ala, Srirangapatna - Timings, History, Best Time to  Visit

ಸಾಲಿಸಿಟರ್ ಜನರಲ್ ವಾದವೇನು: ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, ”1951ರಲ್ಲಿಯೇ ಜುಮ್ಮಾ ಮಸೀದಿ ಸಂರಕ್ಷಿತ ಸ್ಮಾರಕ ಎಂದು ಘೋಷಿಸಲಾಗಿದೆ. ಆದರೆ, ಅಲ್ಲಿ ಕಾನೂನು ಬಾಹಿರ ಮದರಸಾ ಚಟುವಟಿಕೆ ನಡೆಯುತ್ತಿದೆ. ಆ ಚಟುವಟಿಕೆಯನ್ನು ತಡೆದರೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗಲಿದೆ ಎಂದು ಈವರೆಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗಾಗಿ, ಮಸೀದಿಯಲ್ಲಿ ಮದರಸಾವನ್ನು ತೆರವು ಮಾಡಲು ಜಿಲ್ಲಾಧಿಕಾರಿಗೆ ಅಗತ್ಯ ನಿರ್ದೇಶನ ನೀಡಬೇಕು” ಎಂದು ನ್ಯಾಯಪೀಠವನ್ನು ಕೋರಿದರು.

ಆದರೆ, ಕೇಂದ್ರ ಸರ್ಕಾರದ ಹೇಳಿಕೆಗೆ ರಾಜ್ಯ ಸರ್ಕಾರ ಮತ್ತು ವಕ್ಫ್ ಬೋರ್ಡ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ, 1963ರಲ್ಲಿಯೇ ಆ ಮಸೀದಿಯನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಟಿಪ್ಪು ಸುಲ್ತಾನ್ ಷಹೀದ್ ವಕ್ಫ್ ಎಂದು ಘೋಷಿಸಿದ್ದರು. ಅದರಂತೆ ವಕ್ಫ್ ಬೋರ್ಡ್ ಆಸ್ತಿಯಲ್ಲಿ ಮದರಸಾ ಚಟುವಟಿಕೆಗೆ ಅವಕಾಶವಿದೆ ಎಂದು ವಕೀಲರು ವಾದಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 20ಕ್ಕೆ ವಿಚಾರಣೆ ನಿಗದಿಪಡಿಸಿತು.

A Study of Karnataka High Court's Writ Jurisdiction

ಅರ್ಜಿದಾರರ ಮನವಿ ಏನು: ಮಸೀದಿಯಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಮದರಸಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಪ್ರಯೋಜನವಾಗಿಲ್ಲ. ಹಾಗಾಗಿ ನ್ಯಾಯಾಲಯ ಮದರಸಾ ತೆರವಿಗೆ ಸರಕಾರ ಮತ್ತು ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು.

Related posts

Leave a Comment